ADVERTISEMENT
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಚಿಕ್ಕಮಗಳೂರು ಮಾಜಿ ಶಾಸಕ ಸಿ ಟಿ ರವಿಗೆ ಟಿಕೆಟ್ ಸಿಕ್ಕಿದೆ. ಸದ್ಯ ಪರಿಷತ್ ಸದಸ್ಯರಾಗಿರುವ ಎನ್ ರವಿಕುಮಾರ್ಗೆ ಮತ್ತೆ ಟಿಕೆಟ್ ನೀಡಲಾಗಿದೆ. ಮಾಜಿ ಶಾಸಕ ಎಂ ಜಿ ಮೂಳೆ ಅವರಿಗೆ ಟಿಕೆಟ್ ನೀಡಲಾಗಿದೆ.
ಚಿಕ್ಕಮಗಳೂರಲ್ಲಿ ಸೋತಿದ್ದ ಸಿ ಟಿ ರವಿಗೆ ಎಂಎಲ್ಸಿ ಟಿಕೆಟ್ ನೀಡುವ ಮೂಲಕ ಯಡಿಯೂರಪ್ಪ ಬಣದೊಂದಿಗಿನ ಸಿ ಟಿ ರವಿ ಸಂಘರ್ಷಕ್ಕೆ ತೆರೆ ಬಿದ್ದಿದೆ.
ವಿಧಾನಸಭೆಯಿಂದ ಪರಿಷತ್ನ 11 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 66 ಶಾಸಕರ ಬಲ ಹೊಂದಿರುವ ಬಿಜೆಪಿ ಮೂರು ಸ್ಥಾನಗಳನ್ನು ಸುಲಭವಾಗಿ ಗೆದ್ದುಕೊಳ್ಳಲಿದೆ.
ADVERTISEMENT