ADVERTISEMENT
ಕರ್ನಾಟಕದಲ್ಲಿ ಚಂಡಮಾರುತ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಚಂಡಮಾರುತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮೇ 11ರಿಂದ ಮೇ 14ರವರೆಗೆ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಈ ಎರಡೂ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನಾಳೆ ಬೆಳಗ್ಗೆ 8.30ರವರೆಗೆ ಈ ಎರಡೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ADVERTISEMENT