ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಯಲಹಂಕದ LBS ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಚನಕವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಐದು ಮನೆಗಳಿಗೆ ಹಾನಿಯುಂಟಾಗಿದೆ. ಗೋಡೆಗಳು ಬಿರುಕು ಬಿಟ್ಟಿದ್ದು, ಅನೇಕ ವಸ್ತುಗಳು ಪುಡಿ ಪುಡಿಯಾಗಿ ಬಿದ್ದಿವೆ. ಘಟನೆ ಕುರಿತಂತೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.