ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಕನಕಪುರ ತಾಲೂಕನ್ನು ಬೆಂಗಳೂರು ನಗರ ಜಿಲ್ಲೆಗೆ ಸೇರ್ಪಡೆ ಮಾಡುವ ಬಗ್ಗೆ ಘೋಷಣೆ ಮಾಡಿದ ಎರಡೇ ದಿನದಲ್ಲಿ ಡಿಕೆಶಿವಕುಮಾರ್ ಅವರು ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗಿನ ರಾಮನಗರ ಸಂಘರ್ಷಕ್ಕೆ ಹೊಸ ತಿರುವು ಸಿಕ್ಕಿದೆ.
ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.
ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.
ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು.
ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ.
ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ
ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಹಣ ಮತ್ತು ಗೌರವ ಗಳಿಸಲು ಬಯಸುತ್ತಾರೆ. ಆದ್ರೆ ಇದು ಕೆಲವರಿಗೆ ಕನಸು ನಾನಸಾಗುತ್ತದೆ. ಇನ್ನು ಕೆಲವರಿಗೆ ಕನಸು ಹಾಗೆ ಉಳಿದುಬಿಡುತ್ತದೆ. ...
ವೀರಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಇಂದು ಸಿದ್ದರಾಮಯ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದೆ. ನ.22 ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದ ಭಯೋತ್ಪಾದರ ವಿರುದ್ಧದ ಕಾರ್ಯಾಚರಣೆ...
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮುಚ್ಚಳಿಕೆ ಬರೆಸಿ ಪ್ರಕರಣ ದಾಖಲಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ತನಿಖೆಗೆ ಆದೇಶಿಸಲಾಗಿದೆ. ಸ್ಪೀಕರ್ ಯು ಟಿ ಖಾದರ್ ಅವರು...
ಚಳಿಗಾಲದಲ್ಲಿ ಹೆಚ್ಚಾಗಿ ನಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ಚರ್ಮವು ಡ್ರೈ ಆಗುವುದರ ಜೊತೆಗೆ ಮುಖದ ಮೇಲೆ ಸೋಂಕುಗಳು ಹೆಚ್ಚು ಕಂಡುಬರುತ್ತದೆ. ಆದಾಗ್ಯೂ, ಮನೆಯಲ್ಲಿ ಸುಲಭ...