ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ದಿನ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ಕಿಶೋರ್ ಕುಮಾರ್ ಆದೇಶಿಸಿದ್ದಾರೆ.
ಇವತ್ತು ಸಂಜೆ ಸಂಜೆ 6 ಗಂಟೆಯಿಂದ ಆಗಸ್ಟ್ 1ರ ಬೆಳಗ್ಗೆವರೆಗೆ ಆದೇಶ ಜಾರಿಯಲ್ಲಿರಲಿದೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಎಲ್ಲ ಅಂಗಡಿಗಳಿಗೂ ಈ ನಿರ್ಬಂಧ ಅನ್ವಯ ಆಗಲಿದೆ.
ಕೇವಲ ಆಸ್ಪತ್ರೆ, ಕ್ಲಿನಿಕ್, ಮೆಡಿಕಲ್ನಂತ ತುರ್ತು ಸೇವೆಗಳಷ್ಟೇ ಸಂಜೆ 6 ಗಂಟೆಯಿಂದ ಕಾರ್ಯ ಮುಂದುವರಿಸಲು ಅನುಮತಿ ನೀಡಲಾಗಿದೆ.
ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆ ಪ್ರಕರಣದಿಂದ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.
ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕಲ್ಲಿ ಆಗಸ್ಟ್ 1ರವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ.
ADVERTISEMENT
ADVERTISEMENT