ಸಂಜೆ 6 ಗಂಟೆಯ ಬಳಿಕ ಅಂಗಡಿ ಸೇರಿದಂತೆ ವಾಣಿಜ್ಯ ಚಟುವಟಿಕೆಯನ್ನು ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೇರಿರುವ ನಿರ್ಬಂಧ ಮತ್ತೆ ಎರಡು ದಿನ ವಿಸ್ತರಣೆ ಆಗಿದೆ.
ಆಗಸ್ಟ್ 1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ಹೇರಲಾಗಿತ್ತು. ಆ ನಿರ್ಬಂಧವನ್ನು ಆಗಸ್ಟ್ 3ರ ಬೆಳಗ್ಗೆ 6 ಗಂಟೆಯವರೆಗೂ ವಿಸ್ತರಿಸಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.
ಆಗಸ್ಟ್ 2ರವರೆಗೂ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗಷ್ಟೇ ವ್ಯಾಪಾರ ವಹಿವಾಟು ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳಿಂದ ಉಂಟಾಗಿರುವ ವಿಷಮ ಸ್ಥಿತಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ADVERTISEMENT
ADVERTISEMENT