ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆಯ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಆತ್ಮಹತ್ಯೆಗೆ ಶರಣಾದವರು.
ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.