ADVERTISEMENT
ದಕ್ಷಿಣ ಕನ್ನಡದಲ್ಲಿ ನಾಳೆಯೂ ರಜೆ ಘೋಷಿಸಲಾಗಿದೆ. ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಖಾಸಗಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 204 ಮಿಲಿ ಮೀಟರ್ಗಿಂತಲೂ ಅಧಿಕ ಮಳೆ ಬರುವ ಎಚ್ಚರಿಕೆ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಪ್ರವಾಸಿಗರು ಮತ್ತು ಸಾರ್ವಜನಿಕರು ಸಮುದ್ರತೀರ ಮತ್ತು ನದಿ ತೀರಕ್ಕೆ ತೆರಳದಂತೆಯೂ ಜಿಲ್ಲಾಡಳಿತ ಆದೇಶಿಸಿದೆ.
ADVERTISEMENT