ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆ ಅವಧಿ ವಿಸ್ತರಣೆ – ಇನ್ನಷ್ಟು ಅನ್‍ಲಾಕ್ – ಉಸ್ತುವಾರಿ ಸಚಿವರ ಹೇಳಿಕೆ

ಪ್ರಾತಿನಿಧಿಕ ಚಿತ್ರ

ಜುಲೈ 5ಕ್ಕೂ ಮೊದಲೇ ದಕ್ಷಿಣ ಕನ್ನಡ ಸಂಪೂರ್ಣ ಅನ್ ಅನ್‍ಲಾಕ್ ಆಗುವ ನಿರೀಕ್ಷೆ ಇದೆ.

`ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 5 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಸಂಬಂಧ ಇವತ್ತು ಅಥವಾ ನಾಳೆ ಅಧಿಕೃತ ಆದೇಶ ಪ್ರಕಟವಾಗಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬೆಳ್ತಂಗಡಿಯಲ್ಲಿ ಮಾತಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇಕಡಾ 5ಕ್ಕಿಂತ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಂಬಂಧ ಈಗಾಗಲೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಇವತ್ತು ಅಥವಾ ನಾಳೆ ಅಧಿಕೃತ ಆದೇಶ ಪ್ರಕಟವಾಗಲಿದೆ’ ಎಂದು ಸಚಿವರು ಹೇಳಿದರು.

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಮಾತ್ರ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

LEAVE A REPLY

Please enter your comment!
Please enter your name here