ಪ್ರಕೃತಿ ವಿಕೋಪದ ಆತಂಕ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿಯಮಗಳನ್ನು ಉಲ್ಲಂಘಿಸುವ ಪ್ರವಾಸಿಗರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಚ್ಚರಿಕೆ ನೀಡಿದ್ದಾರೆ.
ಪ್ರವಾಸಿಗರು ಭೇಟಿ ನೀಡುವ ವೇಳೆ ಎಚ್ಚರಿಕೆಯಿಂದ ಇರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಸಮುದ್ರ ತೀರಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದ್ದು, ಬೀಚ್ಗಳಲ್ಲಿ ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗಿದೆ.
ಧಾರ್ಮಿಕ ಕೇಂದ್ರಗಳಾದ ಕಟೀಲು, ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗಿದ್ದು, ನದಿ-ತೊರೆ,ಜಲಪಾತಗಳಿಗೆ ಇಳಿಯದಂತೆ ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾಲ್ನಡಿಗೆ ( ಟ್ರೆಕ್ಕಿಂಗ್)ಯನ್ನು ನಿರ್ಬಂಧಿಸಲಾಗಿದೆ. ಸೇತುವೆಗಳ ಬಳಿ ಎಚ್ಚರಿಕೆ ಫಲಕವನ್ನು ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಒಂದು ವಾರದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ 7 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಭೂಕುಸಿತ ಆಗಬಹುದಾದ ಪ್ರದೇಶಗಳಿದ್ದು, ಅವುಗಳಲ್ಲಿ ಬಹುತೇಕ ಚಾರ್ಮಾಡಿ ಘಾಟ್ನಲ್ಲಿದೆ. ಮಂಗಳೂರು ನಗರ ಪಾಲಿಕೆ ವಯಲದಲ್ಲಿ 18 ಪ್ರವಾಹಪೀಡಿತ ಪ್ರದೇಶಗಳಿವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ADVERTISEMENT
ADVERTISEMENT