ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ.
ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು,ಅವರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪ್ರಮುಖ ಆರೋಪಿ ನಂದೀಶ್ ಎಂಬಾತನ ಜೊತೆ ಸೇರಿದ ಇತರ ಆರೋಪಿಗಳು ಗಿರೀಶ್ ಮೂಡಲಗಿರಿಯಪ್ಪ ಮತ್ತು ಗಿರೀಶ್ ಕೆಂಪಣ್ಣ ಎಂಬುವರನ್ನು ಹತ್ಯೆ ಮಾಡಿದ್ದರು.
ಗಿರೀಶ್ ಮೂಡಲಗಿರಿಯಪ್ಪ ಅವರ ಮನೆಗೆ ಬಂದಿದ್ದ ನಂದೀಶ್ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಬಂದಿದ್ದ. ಸಂತ್ರಸ್ತರು ತಪ್ಪಿಸಿಕೊಳ್ಳದಂತೆ ತಡೆಯಲು ಅವರ ಕಾಲುಗಳಿಗೆ ಬೆಂಕಿ ಹಚ್ಚಿದ್ದರು.ಮೂಡಲ ಗಿರಿಯಪ್ಪ ಅವರ ಅಣ್ಣ ಶ್ರೀಧರ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಜಿಪಂ ಮಾಜಿ ಅಧ್ಯಕ್ಷ ವೈ ಹೆಚ್ ಹುಚ್ಚಯ್ಯ ಗುಬ್ಬಿಗೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಸಂತ್ರಸ್ತರಿಗೆ 25 ಲಕ್ಷ ಪರಿಹಾರ ನೀಡಬೇಕು ಹಾಗೂ ಸಂತ್ರಸ್ತರ ಅಣ್ಣನಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜಿನಾಮೆ ನೀಡುವಂತೆ ಆಗ್ರಹಿಸಿದ್ದಾರೆ.