ಮಳೆಯಿಂದ ಮನೆಗಳ ಹಾನಿ : ತಕ್ಷಣವೇ 10 ಸಾವಿರ ಬಿಡುಗಡೆಗೆ ಸಿಎಂ ಸೂಚನೆ

CM Basavaraj Bommai

ರಾಜ್ಯದೆಲ್ಲೆಡೆ ಮತ್ತೆ ಪ್ರವಾಹ ರೀತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ಅವಾಂತರಗಳು ಆಗಿವೆ. ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Cm Basavaraj Bommai) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲಲ್ಲಿ ನೀರು ನಿಂತಿರುವುದರಿಂದ, ವಾಹನಗಳಿಗೆ ಹೋಗಲು ಅನುಕೂಲವಾಗುವಂತೆ ಪರ್ಯಾಯ ಮಾರ್ಗಕ್ಕೆ ಎಸ್‌ಪಿಗಳಿಗೆ ಸೂಚನೆ ನೀಡಿದ್ದೇನೆ, ಇಂದು ರಾಮನಗರಕ್ಕೆ ಭೇಟಿ ನೀಡಿ ಅಲ್ಲಿನ ಮಳೆ ಸಂಬಂಧಿ ಪರಿಸ್ಥಿತಿಗಳನ್ನು ಪರಾಮರ್ಶಿಸಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Cm Basavaraj Bommai) ತಿಳಿಸಿದ್ದಾರೆ.

ಇದನ್ನೂ ಓದಿ : ಭಾರಿ ಮಳೆ ಹಿನ್ನೆಲೆ – ಸಾರ್ವಜನಿಕರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿನಂತಿ ಏನು?

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ನೀರನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಮೈಸೂರು ಡಿಸಿ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲೂ ಸೂಚನೆ ನೀಡಿದ್ದೇನೆ. ಮಳೆಯಿಂದ ಕೆರೆ ಕಟ್ಟೆಗಳಿಂದಾಗುವ ಅಪಾಯಗಳನ್ನು ತಪ್ಪಿಸಲು ಅವುಗಳ ಮೇಲೆ ನಿಗಾ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇದರೊಂದಿಗೆ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂಪಾಯಿ ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ : ಭಾರೀ ಮಳೆ : ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​​

LEAVE A REPLY

Please enter your comment!
Please enter your name here