ದಕ್ಷಿಣ ಕನ್ನಡ : ಶಾಲಾ-ಕಾಲೇಜುಗಳಿಗೆ ದಸರಾ ರಜೆ ಘೋಷಣೆ – ಷರತ್ತು ಅನ್ವಯ

Mysuru Dasara

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 10ರ ವರೆಗೆ ದಸರಾ ರಜೆ (Dasara Holiday) ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಈ ಸಂಬಂಧ ಸೂಚನೆ ನೀಡಿದ್ದಾರೆ.

ಅಕ್ಟೋಬರ್‌ 2ರ ಗಾಂಧಿ ಜಯಂತಿ ಆಚರಣೆಯ ಷರತ್ತಿನ ಮೇರೆಗೆ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 10ರ ವರೆಗೆ ದಸರಾ ರಜೆ (Dasara Holiday) ನೀಡುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ನವರಾತ್ರಿ ಹಬ್ಬಕ್ಕೆ ಪೂರಕವಾಘುವಂತೆ ದಸರಾ ರಜೆ ನೀಡಬೇಕು ಎಂದು ಸ್ಥಳೀಯ ಶಾಸಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಶಾಸಕರ ಮನವಿಗೆ ಸಚಿವರು ಸ್ಪಂದಿಸಿ ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ : ದಕ್ಷಿಣ ಕನ್ನಡ : ಧಾರಾಕಾರ ಮಳೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

LEAVE A REPLY

Please enter your comment!
Please enter your name here