ಒಂದು ವೇಳೆ ತರಗತಿಗಳಲ್ಲಿ 10ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕಿನ ಲಕ್ಷಣ ಕಂಡುಬAದಲ್ಲಿ ಅಂತಹ ಶಾಲೆಗೆ ಎರಡ್ಮೂರು ದಿನ ರಜೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚಿಸಿದೆ.
ಅಂತಹ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಪೂರ್ವಾನುಮತಿ ಪಡೆಯಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಿದೆ.
ಬೆಂಗಳೂರು ನಗರದ ಕೆಲವು ಶಾಲೆಗಳ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.