ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಜೂನ್ 1ರಂದು ಲೋಕಸಭೆಯ ಕಡೆಯ ಹಂತದ ಮತದಾನ ನಡೆಯಲಿದೆ. ಜೂನ್ 2ರಂದು ಕೇಜ್ರಿವಾಲ್ ಅವರು ನ್ಯಾಯಾಲಯದ ಎದುರು ಶರಣಾಗಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಹೇಳಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕನಾಗಿರುವ ಕೇಜ್ರಿವಾಲ್ಗೆ ಪ್ರಚಾರಕ್ಕೆ ಅವಕಾಶ ನೀಡುವ ಸಲುವಾಗಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿದೆ.
21 ದಿನಗಳಿಂದ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ.
ADVERTISEMENT
ADVERTISEMENT