ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಜ. 5ರವರೆಗೆ ವಿಸ್ತರಿಸಿದೆ.
ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್, ನೀಲಂ ಆಜಾದ್ ಮತ್ತು ಅಮೋಲ್ ಶಿಂಧೆಯನ್ನು ನ್ಯಾಯಾಧೀಶರೆದುರು ಹಾಜರುಪಡಿಸಲಾಯ್ತು.
ಡಿ.13ರಂದು ಬಂಧಿಸಲ್ಪಟ್ಟಿರುವ ಆರೋಪಿಗಳ 7 ದಿನಗಳ ಪೊಲೀಸ್ ಕಸ್ಟಡಿ ಮುಗಿದಿದ್ದು ಇದೀಗ ಆರೋಪಿಗಳ ಕುರಿತಾಗಿ ಹೆಚ್ಚುವರಿ ವಿಚಾರಣೆ ಮತ್ತು ಪ್ರಕರಣದ ತನಿಖೆಗಾಗಿ ಇನ್ನೂ 15 ದಿನಗಳು ಬೇಕು ಎಂದು ಪೊಲೀಸರು ಅರ್ಜಿ ಸಲ್ಲಿಸಿದ್ದರು.
ಇನ್ನು ಆರೋಪಿಗಳು ತನಿಖೆ ವೇಳೆ ಪದೇ ಪದೇ ತಮ್ಮ ಹೇಳಿಕೆಗಳನ್ನು ಬದಲಾಯಿಸುತ್ತಿದ್ದು, ನಿಜಾಂಶ ತಿಳಿದುಬರುತ್ತಿಲ್ಲ. ಹೀಗಾಗಿ ಆರೋಪಿಗಳ ಸಾಮಾಜಿಕ ಜಾಲತಾಣ ಖಾತೆಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಬೇಕು ಇದಕ್ಕಾಗಿ ಹೆಚ್ಚುವರಿ 15 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಸ್ತರಿಸುವಂತೆ ಪೊಲೀಸರು ಕೋರಿದ್ದರು. ಅಂತೆಯೇ ಕೋರ್ಟ್ ಜ.5ರವರೆಗೆ ಕಸ್ಟಡಿ ಅವಧಿ ವಿಸ್ತರಿಸಿದ್ದು ತನಿಖಾಧಿಕಾರಿಗಳು ಆರೋಪಿಗಳ ಹೆಚ್ಚುವರಿ ತನಿಖೆಯಲ್ಲಿ ನಿರತರಾಗಿದ್ದಾರೆ.