BIG BREAKING: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೃದಯಾಘಾತದಿಂದ​ ನಿಧನ

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರಿಗೆ 61 ವರ್ಷ ವಯಸ್ಸಾಗಿತ್ತು.

ಇವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದರು. ಕೊಳ್ಳೇಗಾಲ ಮತ್ತು ಸಂತೇಮರಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು.

ಧ್ರುವನಾರಾಯಣ್​ ಅವರನ್ನು ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್​ ಯೋಚಿಸಿತ್ತು. 

ಕಾಂಗ್ರೆಸ್​ ಸುದ್ದಿಗೋಷ್ಠಿ ರದ್ದು:

ಪಕ್ಷದ ಕಾರ್ಯಾಧ್ಯಕ್ಷ ಧ್ರುವನಾರಾಯಣ್​ ಆಕಾಲಿಕ ನಿಧನದ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗೆ 9.30ಕ್ಕೆ ನಿಗದಿಯಾಗಿದ್ದ ಮಾಧ್ಯಮಗೋಷ್ಠಿಯನ್ನು ಕಾಂಗ್ರೆಸ್​ ರದ್ದುಗೊಳಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಂದೀಪ್​ ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ.

1 ಮತದಿಂದ ಗೆದ್ದು ಇತಿಹಾಸ:

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 1 ಮತದಿಂದ ಗೆಲುವ ಮೂಲಕ ಧ್ರುವ ನಾರಾಯಣ್​ ಅವರು ಇತಿಹಾಸ ನಿರ್ಮಿಸಿದ್ದರು.

ದಲಿತ ಮುಖ:

ಹಳೆ ಮೈಸೂರು ಭಾಗದಲ್ಲಿ ಪ್ರಮುಖ ದಲಿತ ಮುಖವಾಗಿದ್ದ ಧ್ರುವನಾರಾಯಣ್​ ಅವರು ಸರಳ, ಸಜ್ಜನ ರಾಜಕಾರಣಿ ಎಂದೇ ಜನಜನಿತರಾಗಿದ್ದರು.

LEAVE A REPLY

Please enter your comment!
Please enter your name here