ಭಾರತ ಸರ್ಕಾರದ ನೇರ ತೆರಿಗೆ ಸಂಗ್ರಹ ಶೇ.45 ರಷ್ಟು ಹೆಚ್ಚಳವಾಗಿದೆ.
ಜೂನ್ ಮಧ್ಯಂತರಕ್ಕೆ 45 ಪ್ರತಿಶತ ನೇರ ಸಂಗ್ರಹ ಹೆಚ್ಚಳವಾಗಿದ್ದು, 3.39 ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ನೇರ ತೆರಿಗೆಯಿಂದ ಹರಿದು ಬಂದಿದೆ ಎಂದು ಆರ್ಥಿಕ ಇಲಾಖೆ ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ಹೇಳಲಾಗಿದೆ.
ಕಳೆದ 2 ವರ್ಷಗಳಲ್ಲಿ ಕೊರೋನಾ ಸಾಂಕ್ರಾಮಿಕದಿಂದ ಕೇಂದ್ರ ಸರ್ಕಾರದ ನೇರ ತೆರಿಗೆ ಸಂಗ್ರಹಕ್ಕೆ ದೊಡ್ಡ ಪೆಟ್ಟು ಬಿದ್ದಿತ್ತು.