ಪಕ್ಷದ ಹೈಕಮಾಂಡ್ ಎಲ್ಲಿಯೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ: ಡಿಸಿಎಂ ಕಾರಜೋಳ

ಬೆಳಗಾವಿ: ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಟಿ. ಪಕ್ಷದ ಹೈಕಮಾಂಡ್ ಎಲ್ಲಿಯೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ. ಹೀಗಾಗಿ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಅಂತಹ ದೊಡ್ಡ ಮಟ್ಟದ ಪ್ರವಾಹ ಬಂದಿಲ್ಲ‌. ಒಂದು ವೇಳೆ ಪ್ರವಾಹ ಬಂದರೂ ಅದನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ನದಿಗಳ ಒಳಹರಿವು ಪ್ರಮಾಣ ಹೆಚ್ಚಾಗಿರುವುದರಿಂದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಅಧಿಕಾರಿಗಳ ಜೊತೆ ಸಹಕರಿಸಬೇಕು ಎಂದರು.

ಕೃಷ್ಣಾ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ಮೂರು ಲಕ್ಷ ಕ್ಯೂಸೆಕ್ಸ ನೀರು ಬಿಡಲು ಸೂಚಿಸಲಾಗಿದೆ. ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.

LEAVE A REPLY

Please enter your comment!
Please enter your name here