ರಾಯಚೂರು: ಶೀಲಹಳ್ಳಿ ಸೇತುವೆ ಮುಳುಗಡೆ, ಜಿಲ್ಲೆಯ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ

ರಾಯಚೂರು : ಜಲಾನಯನ ಪ್ರದೇಶದಲ್ಲಿ ಹೆಚ್ಚಿದ ಮಳೆಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.50 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದರಿಂದ ಲಿಂಗಸೂಗೂರು ತಾಲೂಕು ವ್ಯಾಪ್ತಿಯ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.

ಇದರಿಂದ ಕಡದರಗಡ್ಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ವಿವಿಧ ನಡುಗಡ್ಡೆ ಪ್ರದೇಶಗಳಿಗೆ ಸಂಪರ್ಕ ಕಡಿತಗೊಂಡಿದೆ. ಬೆಳಗ್ಗೆ 1.90 ಕ್ಯೂಸೆಕ್ ನೀರು ಹರಿಸಲಾಗಿತ್ತು. ಒಳಹರಿವು ಹೆಚ್ಚಾಗುತ್ತಿದ್ದಂತೆ ಜಲಾಶಯದಿಂದ ಹೊರಹರಿವು ಹೆಚ್ಚಾಗಿದೆ.

ಅಲ್ಲದೇ ಸಂಜೆ ವೇಳೆಗೆ ಈ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಯಾದಗಿರಿ ಜಿಲ್ಲೆಯ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇನ್ನು ನದಿ ಪಕ್ಕದ ಹೊಲದಲ್ಲಿದ್ದ ಪಂಪ್ ಸೆಟ್, ಪೈಪ್ ಸೇರಿದಂತೆ ಕೃಷಿ ಉಪಕರಣಗಳನ್ನು ನದಿ ಪಾತ್ರದ ರೈತರು ಸ್ಥಳಾಂತರಿಸುತ್ತಿದ್ದು, ನದಿಪಾತ್ರದ ಹಳ್ಳಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ವಿಪತ್ತು ನಿರ್ವಹಣಾ ಸಮಿತಿಗೆ ಎಸಿ ತಿಳಿಸಿದ್ದಾರೆ.

ನದಿಗೆ ಇಳಿಯದಂತೆ ಗ್ರಾಮಗಳಲ್ಲಿ ಡಂಗೂರ ಸಾರಿ ಹೇಳಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ.

LEAVE A REPLY

Please enter your comment!
Please enter your name here