ಮತ್ತೆ ಗ್ಯಾಸ್ ಬೆಲೆ ಏರಿಕೆ : 1 ಸಾವಿರದ ಗಡಿ ದಾಟಿದ ಸಿಲಿಂಡರ್ ಬೆಲೆ

Gas Prcie
Gas Prcie

ದಿನಬಳಕೆಯ ಅಡುಗೆ ಅನಿಲ(ಎಲ್​ಪಿಜಿ) ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ.

ಈ ಮೊದಲು 999.50 ರೂಪಾಯಿಗಳಿದ್ದ ಗೃಹಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 1003 ರೂಪಾಯಿ ಆಗಿದ್ದು, 1 ಸಾವಿರ ರೂ.ಗಳ ಗಡಿ ದಾಟಿದೆ. ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ.

ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು.

14.2 ಕೆಜಿ LPG ಸಿಲಿಂಡರ್ ಈಗ ದೆಹಲಿಯಲ್ಲಿ 1003 ರೂ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 1029 ರೂಪಾಯಿಗೆ ದರವನ್ನು ಪರಿಷ್ಕರಿಸಲಾಗಿದೆ. ದರ ಏರಿಕೆಯ ನಂತರ ಚೆನ್ನೈ ಸಿಲಿಂಡರ್ ಬೆಲೆ 1018.5 ರೂಪಾಯಿ ಆಗಿದೆ. ಮುಂಬೈನಲ್ಲಿ ಹೊಸ ದರ 1003 ರೂಪಾಯಿ ಆಗಿದೆ.

LEAVE A REPLY

Please enter your comment!
Please enter your name here