ADVERTISEMENT
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕಗೊಂಡಿದ್ದಾರೆ.
ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇದೇ ತಿಂಗಳ ಅಂದರೆ ನವೆಂಬರ್ ೩೦ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಡಾ ರಜನೀಶ್ ಗೋಯಲ್ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ರಜನೀಶ್ ಗೋಯಲ್ ಅವರು ೧೯೮೬ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಸದ್ಯ ಒಳಾಡಳಿತ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಪತ್ನಿ ಶಾಲಿನಿ ರಜನೀಶ್ ಕೂಡಾ ಐಎಎಸ್ ಅಧಿಕಾರಿಯಾಗಿದ್ದಾರೆ.
ADVERTISEMENT