ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರೇ ಮುಂದುವರಿಯಲಿದ್ದಾರೆ. ಮುಖ್ಯ ಕೋಚ್ ಆಗಿ ದ್ರಾವಿಡ್ ಅವರನ್ನು ಬಿಸಿಸಿಐ ಒಂದು ವರ್ಷದ ಮಟ್ಟಿಗೆ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.
ಮುಂದಿನ ವರ್ಷದ ಜೂನ್ವರೆಗೆ ಅಂದರೆ ಐಸಿಸಿ ಟಿ-ಟ್ವೆಂಟಿ ವಿಶ್ವಕಪ್ವರೆಗೆ ದ್ರಾವಿಡ್ ಅವರು ಮುಖ್ಯ ಕೋಚ್ ಆಗಿರಲಿದ್ದಾರೆ.
2021ರ ನವೆಂಬರ್ನಲ್ಲಿ ಎರಡು ವರ್ಷದ ಅವಧಿಗೆ ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರು.
ಮುಂದಿನ ವರ್ಷ ಟಿ-ಟ್ವೆಂಟಿ ವಿಶ್ವಕಪ್ ನಡೆಯಲಿರುವ ಹಿನ್ನೆಲೆಯಲ್ಲಿ ದ್ರಾವಿಡ್ ಅವರನ್ನೇ ಮುಂದುವರಿಸುವ ಬಗ್ಗೆ ಬಿಸಿಸಿಐ ನಿರ್ಧರಿಸಿದೆ.
ದ್ರಾವಿಡ್ ಅವರು ಕೋಚ್ ಆದ ಬಳಿಕ ಟೆಸ್ಟ್ನಲ್ಲಿ ಭಾರತ ಮೇಲ್ಪಂಕ್ತಿಗೆ ಏರಿತ್ತಾದರೂ 2022ರ ಟಿ-ಟ್ವೆಂಟಿ ವಿಶ್ವಕಪ್ ಸೆಮಿಫೈನಲ್, ಟೆಸ್ಟ್ ವರ್ಲ್ಡ್ ಕಪ್ ಮತ್ತು ಏಕದಿನ ವಿಶ್ವಕಪ್ನ ಫೈನಲ್ನಲ್ಲಿ ಸೋಲು ಅನುಭವಿಸಿತ್ತು.
ADVERTISEMENT
ADVERTISEMENT