ಸೌಜನ್ಯಗೆ ನ್ಯಾಯ ಸಿಗುವವರೆಗೆ ಧರ್ಮಸ್ಥಳದ ಮಂಜುನಾಥನ ದರ್ಶನ ಮಾಡಲ್ಲ- ನಟ ದುನಿಯ ವಿಜಯ್​

ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಕ್ಕೆ ನ್ಯಾಯ ಸಿಗುವವರೆಗೆ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆಯುವುದಿಲ್ಲ ಎಂದು ನಟ ದುನಿಯಾ ವಿಜಯ್​ ಘೋಷಿಸಿದ್ದಾರೆ.

ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.

ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ

ಎಂದು ನಟ ದುನಿಯಾ ವಿಜಯ್​ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here