ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆ ಸಂಸದ ಮತ್ತು ಶಿವಸೇನೆಯ ಮುಖವಾಣಿ ಸಾಮ್ನಾ ಸಂಪಾದಕ ಸಂಜಯ್ ರಾವತ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಇವತ್ತು ಬೆಳಗ್ಗೆಯೇ ಸಂಜಯ್ ರಾವತ್ ಅವರ ಮನೆಗೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಈ ಮೂಲಕ ಉದ್ಧವ್ ಠಾಕ್ರೆ ಬಣದ ಮುಖ ರಾವತ್ಗೆ ದೊಡ್ಡ ಆಘಾತ ಸಿಕ್ಕಿದೆ.
ಜುಲೈ 1ರಂದು ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜಾರಿ ನಿರ್ದೇಶನಾಲಯ ರಾವತ್ ಅವರನ್ನು ವಿಚಾರಣೆ ನಡೆಸಿತ್ತು. ಆ ಬಳಿಕ ರಾವತ್ ವಿಚಾರಣೆಗೆ ಹಾಜರಾಗಿರಲಿಲ್ಲ.
ಏಪ್ರಿಲ್ನಲ್ಲಿ ರಾವತ್ ಅವರಿಗೆ ಸೇರಿದ 11.15 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿಕೊಂಡಿತ್ತು.
ADVERTISEMENT
ADVERTISEMENT