ADVERTISEMENT
ಲಂಚ ಸ್ವೀಕಾರ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪಗೆ ಸಂಕಷ್ಟ ಶುರುವಾಗಿದೆ.
ಶಾಸಕ ಮಾಡಾಳ್ ಅಕ್ರಮ ಹಣ ವರ್ಗಾವಣೆ ನಡೆಸಿದ್ದಾರೆಯೇ ಎಂಬ ಬಗ್ಗೆ ಜಾರಿ ನಿರ್ದೇಶನಾಲಯ ಪ್ರಾಥಮಿಕ ಮಾಹಿತಿಗಳನ್ನು ಸಂಗ್ರಹಿಸಿದೆ ಎಂದು ಪ್ರಮುಖ ಇಂಗ್ಲೀಷ್ ದೈನಿಕ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ 6 ಕೋಟಿ ರೂಪಾಯಿ ನಗದು, ಪುತ್ರ ಪ್ರಶಾಂತ್ ಮಾಡಾಳ್ ನಿವಾಸದಲ್ಲಿ 2 ಕೋಟಿ ರೂಪಾಯಿ ನಗದು ಮತ್ತು ಲಂಚ ಸ್ವೀಕಾರ ವೇಳೆ 40 ಲಕ್ಷ ರೂಪಾಯಿ ನಗದನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದರು.
ಅಕ್ರಮ ಹಣ ವರ್ಗಾವಣೆ ಸಂಬಂಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಜಾರಿ ನಿರ್ದೇನಾಲಯಕ್ಕೆ ವರದಿ ನೀಡಿದ್ದರು.
ಈಗಾಗಲೇ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿರುವ ಲೋಕಾಯುಕ್ತ ಮಾಡಾಳ್ ವಿರೂಪಾಕ್ಷಪ್ಪ ಕೊಡಲಾಗಿರುವ ಜಾಮೀನು ರದ್ದುಪಡಿಸುವಂತೆ ಕೋರಿದೆ.
ADVERTISEMENT