ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆ ಆಗಲಿರುವ ಹಿನ್ನೆಲೆಯಲ್ಲಿ ಚುನಾವಣಾ ಘೋಷಣೆಗೂ ಮೊದಲು ಪ್ರಮುಖ ಸಮುದಾಯದ ಮತ ಸೆಳೆಯಲು ಬಿಜೆಪಿ ಸರ್ಕಾರ ಪ್ರಯತ್ನಿಸಿದೆ.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಆದೇಶಿಸಿದೆ.
ಈಡಿಗ-ಬಿಲ್ಲವ ಸಮುದಾಯದಲ್ಲಿ ಬರುವ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿರುವುದಾಗಿ ಸರ್ಕಾರ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಫೆಬ್ರವರಿ 17ರಂದು ಮಂಡನೆಯಾದ ಬಜೆಟ್ನಲ್ಲಿ ಬಿಲ್ಲವ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಘೋಷಣೆ ಮಾಡಿರಲಿಲ್ಲ. ಇದು ಬಿಲ್ಲವ ಸಮುದಾಯದ ಕೆಂಗಣ್ಣಿಗೆ ಕಾರಣವಾಗಿತ್ತು.
ADVERTISEMENT
ADVERTISEMENT