ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ವಿಷಯವು ಇದೀಗ ಕೆಲವು ಸೂಕ್ಷ್ಮ ಪ್ರದೇಶದಲ್ಲಿರುವ ಶಾಲೆಗಳ ಮಕ್ಕಳ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಕ್ಕಳು ಯಾರೂ ಕೂಡ ಆತಂಕಕ್ಕೆ ಒಳಗಾಗೋದು ಬೇಡ. ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡಲ್ಲ ಎಂದಿದ್ದಾರೆ.
ಹಿಜಾಬ್ ವಿಚಾರ ಕುರಿತಾಗಿ ನಾನು ಕಾನೂನು ಸಚಿವರ ಜೊತೆಗೆ ಮಾತನಾಡ್ತೇನೆ. ರಾಜ್ಯದ ಶಾಲಾ ಮಕ್ಕಳು ಯಾವುದೇ ಕಾರಣಕ್ಕೂ ಆತಂಕ ಪಡೋದು ಬೇಡ. ಶಾಲೆಗೆ ಹೋಗಿ ಶಿಕ್ಷಣ ಕಲಿಯಿರಿ ಅಂತ ಕರೆ ನೀಡಿರುವ ಸಚಿವ ಮಧು ಬಂಗಾರಪ್ಪ, ಬಿಜೆಪಿಯವರು ಹಿಜಾಬ್ ನಿಷೇಧ ಮಾಡಿ ರಾಜಕೀಯ ಮಾಡಿದರು ಅಂತ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.