ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆಯ ನಂದಿಹಳ್ಳಿಯಲ್ಲಿ ಕೃತ್ಯ ನಡೆದಿದೆ.
ಸಚಿವರು ತಮಗೆ ನೀಡಲಾಗಿರುವ ಸರ್ಕಾರಿ ಕಾರಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಸಚಿವರ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಕಾರು ಮತ್ತು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವ ಮಧು ಬಂಗಾರಪ್ಪ ಬಳಿಕ ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದರು.
ADVERTISEMENT
ADVERTISEMENT