ಮೂಡಬಿದ್ರೆ ತಾಲೂಕು ಪಂಚಾಯತ್​ EO ಅಮಾನತು ಆದೇಶ ರದ್ದು – ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ

Assembly Session

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿ ದಯಾಮತಿ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಶಿಷ್ಟಾಚಾರ ಉಲ್ಲಂಘನೆ ಆರೋಪದಡಿಯಲ್ಲಿ ತಾಲೂಕು ಪಂಚಾಯತ್​ ಇಒ ದಯಾಮತಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ ಕಾರ್ಯನಿರ್ವಹಾಧಿಕಾರಿಯವರು ಅಮಾನತು ಮಾಡಿದ್ದರು.

ಇಒ ಅಮಾನತನ್ನು ಹಿಂಪಡೆಯುವಂತೆ ಮೂಡಬಿದ್ರೆ ಬಿಜೆಪಿ ಶಾಸಕ ಉಮಾನಾಥ್​ ಕೋಟ್ಯಾನ್​ ಆಗ್ರಹಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಮಾನತು ಆದೇಶವನ್ನು ವಾಪಸ್​ ಪಡೆದಿದೆ.

ಇನ್ನು ಮುಂದೆ ಇಂತಹ ಘಟನೆಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಲು ಎಚ್ಚರಿಕೆ ನೀಡಿ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಇರುವೈಲ್​ ಗ್ರಾಮ ಪಂಚಾಯತ್​ನ ಪಂಚಾಯತ್​ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಮಾನತು ಆದೇಶವನ್ನೂ ಹಿಂಪಡೆಯಲಾಗಿದೆ.

ಪ್ರಕರಣ ಏನು..?

ಮೂಡಬಿದ್ರೆ ತಾಲೂಕಿನ ಇರುವೈಲ್​ ಗ್ರಾಮ ಪಂಚಾಯತಿ ಕಟ್ಟಡ ಮತ್ತು ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವರ ಹೆಸರನ್ನು ಮುದ್ರಿಸದೇ ಶಿಷ್ಟಾಚಾರ ಉಲ್ಲಂಘಿಸಿದ್ದರು.  

LEAVE A REPLY

Please enter your comment!
Please enter your name here