ಪರದೂಷಣೆಯಲ್ಲಿ ನಿರತರಾಗಿರುವ ಸಿ ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಿನ್ನೆ ಭಟ್ಕಳದಲ್ಲಿ ಮಾಂಸ ತಿಂದು ಸಿ ಟಿ ರವಿ ದೇವಸ್ಥಾನಕ್ಕೆ ಹೋಗಿದ್ದು ವಿವಾದವಾಗಿತ್ತು.
ಈ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಸಿ ಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ @CTRavi_BJP ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ.
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ @CTRavi_BJP ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು @BJP4Karnataka ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ @CTRavi_BJP ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ @BJP4Karnataka ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ
ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ಗಳ ಮೂಲಕ ಸಿ ಟಿ ರವಿ ಮತ್ತು ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ADVERTISEMENT
ADVERTISEMENT