ಸೈದ್ಧಾಂತಿಕವಾಗಿ ವಿರುದ್ಧ, ರಾಷ್ಟ್ರೀಯ ಆಶಯಕ್ಕೆ ಪೂರಕವಲ್ಲದ ಕಾರ್ಯಕ್ರಮ -ಸಿದ್ದರಾಮಯ್ಯ,ಮಹದೇವಪ್ಪ ಸ್ಪಷ್ಟನೆ

ಸೈದ್ಧಾಂತಿಕವಾಗಿ ವಿರುದ್ಧವಾಗಿರುವ  ಮತ್ತು ರಾಷ್ಟ್ರೀಯ ಆಶಯಕ್ಕೆ ಪೂರಕವಲ್ಲದ ಕಾರಣ ಭಾರತ-ಚೀನಾ (India – China) ಸ್ನೇಹ ಸಂಘ ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಹೆಚ್​ ಸಿ ಮಹದೇವಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಆಗಸ್ಟ್​ 28ರಂದು ಬೆಂಗಳೂರಿನ ಚಿತ್ರಕಲಾ ಪರಿಷತ್​ನಲ್ಲಿ ತೈವಾನ್​ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಚೀನಾದ ಆಂತರಿಕ ವ್ಯವಹಾರಗಳಲ್ಲಿ ಅಮೆರಿಕ ಸಾಮ್ರಾಜ್ಯಶಾಹಿಯ ಹಸ್ತಕ್ಷೇಪ ಖಂಡಿಸಿ ಮತ್ತು ಚೀನಾದ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
India-China Friendship Association
India-China Friendship Association
ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್​ ಸಿ ಮಹದೇವಪ್ಪ, ಪಿ ಜಿ ಅರ್​ ಸಿಂಧ್ಯಾ, ಕಾಂಗ್ರೆಸ್​ ರಾಜ್ಯಸಭಾ ಸಂಸದ ಎಲ್​ ಹನುಮಂತಯ್ಯ ಅವರ ಹೆಸರನ್ನು ಮುದ್ರಿಸಲಾಗಿದೆ.
ಈ ಬಗ್ಗೆ ಸಿದ್ದರಾಮಯ್ಯ (Siddaramaiah) ಅವರು ನೀಡಿರುವ ಸ್ಪಷ್ಟನೆ ಹೀಗಿದೆ:
India-China Friendship Association ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು.
ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ.
ಮಾಜಿ ಸಚಿವ ಹೆಚ್​ ಸಿ ಮಹದೇವಪ್ಪ (H C Mahadevappa) ಅವರ ಸ್ಪಷ್ಟನೆ:
ಕರ್ನಾಟಕದಲ್ಲಿರುವ ಇಂಡೋ – ಚೀನಾ ಸೌಹಾರ್ದ ವೇದಿಕೆಯು ನಮ್ಮ ಗಮನಕ್ಕೆ ತಾರದೆ ನನ್ನೊಡನೆ ಚರ್ಚಿಸದೇ “ಚೀನಾದ ಆಂತರಿಕ ವ್ಯವಹಾರದಲ್ಲಿ ಅಮೆರಿಕಾದ ಹಸ್ತಕ್ಷೇಪ” ಎಂಬ ವಿಷಯದ ಕುರಿತು ಸಂವಾದ ನಡೆಸಲು ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದೆ.
ಈ ಆಹ್ವಾನ ಪತ್ರಿಕೆಯನ್ನು ನೋಡಿದ ದಿನವೇ ಇದೊಂದು ಅಸಂಬದ್ಧ ಹಾಗೂ ನಮ್ಮ ರಾಷ್ಟ್ರೀಯ ಆಶಯಕ್ಕೆ ಪೂರಕವಲ್ಲದ ವಿಷಯ ಎಂದು ಅನ್ನಿಸಿದ್ದರಿಂದ ಈ ಸಂವಾದದಲ್ಲಿ ಪಾಲ್ಗೊಳ್ಳಬಾರದು ಎಂದು ಈಗಾಗಲೇ ನಾನು ನಿರ್ಧರಿಸಿದ್ದೆ
ಆದರೆ ಈ ಸಂಗತಿಯು ಇದೀಗ ಚರ್ಚಾ ವಿಷಯವಾಗಿ ಮುನ್ನಲೆಗೆ ಬಂದಿದ್ದು ” ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಈ ಮೂಲಕ ಸ್ಪಷ್ಟ ಪಡಿಸುತ್ತಿದ್ದೇನೆ
ಎಂದು ಮಾಜಿ ಸಚಿವ ಹೆಚ್​ ಸಿ ಮಹದೇವಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಕೋಲಾರ ಶಾಸಕರೇ ಅಧ್ಯಕ್ಷರು:
ವಿಚಿತ್ರ ಎಂದರೆ ಈ ಸ್ನೇಹ ಸಂಘಕ್ಕೆ ಕೋಲಾರದ ಜೆಡಿಎಸ್​ ಶಾಸಕ ಶ್ರೀನಿವಾಸ್ ಗೌಡ (Kolar MLA Srinivas Gowda) ಅಧ್ಯಕ್ಷರು. ಇವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪರವಾಗಿ ಅಡ್ಡಮತದಾನ ಮಾಡಿದ್ದರು ಮತ್ತು ಕಾಂಗ್ರೆಸ್​ ಸೇರಲಿದ್ದಾರೆ.

LEAVE A REPLY

Please enter your comment!
Please enter your name here