ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಸಲುವಾಗಿ ಯಾವುದೇ ನಾಯಕರನ್ನಾದರೂ ಭೇಟಿ ಮಾಡಲು ಸಿದ್ಧನಿದ್ದೇನೆ ಅಂತ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ, ಮಂಡ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಅಗತ್ಯಬಿದ್ದರೆ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರೊಂದಿಗೂ ಮಾಡೋದಾಗಿ ತಿಳಿಸಿದ್ರು.
ವಿ.ಸೋಮಣ್ಣ, ಎಚ್.ಡಿ.ದೇವೇಗೌಡ, ಸಿ.ಟಿ.ರವಿ, ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿಕೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಅಂತ ಪ್ರಶ್ನಿಸಿದ್ರು.
ಇತ್ತೀಚೆಗಷ್ಟೇ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂದು ಘೋಷಿಸಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಮನವೊಲಿಸಲು ತಮ್ಮ ಪಕ್ಷವೂ ಕೂಡ ಪ್ರಯತ್ನಿಸಲಿದೆ ಎಂದು ಎಚ್‌ಡಿಕೆ ತಿಳಿಸಿದ್ರು.