ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತನಿಗೆ ಜನಾರ್ದನ ರೆಡ್ಡಿ ಗಾಳ

ವಿಧಾನಸಭಾ ಚುನಾವಣೆಗೆ ನಾಲ್ಕೇ ತಿಂಗಳು ಬಾಕಿ ಇರುವ ಹೊತ್ತಲ್ಲಿ ಹೊಸ ಪಕ್ಷ ಕಟ್ಟಿರುವ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರನ್ನೇ ಪಕ್ಷಕ್ಕೆ ಸೆಳೆಯುವ ಕಸರತ್ತು ಮಾಡುತ್ತಿದ್ದಾರೆ.
ಸಿದ್ದರಾಮಯ್ಯನವರ ಆಪ್ತ ಮತ್ತು ಕುರುಬ ಸಮುದಾಯದ ಮುಖಂಡ ಹನುಮಂತ ಅರಸನಕೇರಿ ಅವರ ಮನೆಗೆ ಜನಾರ್ದನ ರೆಡ್ಡಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಈ ಮೂಲಕ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಆಗಲಿರುವ ಇಕ್ಬಾಲ್​ ಅನ್ಸಾರಿ ಅವರನ್ನು ಸೋಲಿಸಲು ಸಿದ್ದರಾಮಯ್ಯ ಅವರ ಆಪ್ತರನ್ನೇ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಹನುಮಂತ ಅರಸನಕೇರಿ ಸಹೋದರನ ಮದುವೆಗೆ ಬಂದಿದ್ದ ಸಿದ್ದರಾಮಯ್ಯ ಅವರು ಗಂಗಾವತಿಯಲ್ಲಿ ಈ ಬಾರಿ ಇಕ್ಬಾಲ್​ ಅನ್ಸಾರಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದರು.
ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಎರಡು ಜಿಲ್ಲಾ ಪಂಚಾಯತ್​ ಕ್ಷೇತ್ರಗಳಲ್ಲಿ ಹನುಮಂತ ಅವರು ಪ್ರಭಾವ ಹೊಂದಿದ್ದಾರೆ.
ತಾವು ರಾಜಕೀಯವಾಗಿ ತಟಸ್ಥರಾಗಿರುವುದಾಗಿ ಇತ್ತೀಚೆಗ ಹನುಮಂತ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.
ಈಗ ಸ್ವತಃ ಜನಾರ್ದನ ರೆಡ್ಡಿ ಅವರೇ ಹನುಮಂತ ಅವರ ಮನೆಗೆ ಭೇಟಿ ಕೊಟ್ಟು ಮಾತುಕತೆ ನಡೆಸಿರುವ ಕಾರಣ ಇವರು ರೆಡ್ಡಿ ಹೊಸ ಪಕ್ಷ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವದಂತಿಗಳಿಗೆ ಪುಷ್ಠಿ ಸಿಕ್ಕಿದೆ.

LEAVE A REPLY

Please enter your comment!
Please enter your name here