ಫ್ಯಾಕ್ಟ್ ಚೆಕಿಂಗ್ ವೆಬ್ಸೈಟ್ ಆಲ್ಟ್ ನ್ಯೂಸ್ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲಾ 6 ಪ್ರಕರಣಗಳಿಗೂ ಇಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಈಗಾಗಲೇ 2 ಪ್ರಕರಣಗಳಲ್ಲಿ ಮೊಹಮ್ಮದ್ ಜುಬೈರ್ ಜಾಮೀನು ಪಡೆದುಕೊಂಡಿದ್ದಾರೆ.
ಆ ಮೂಲಕ ಮೊಹಮ್ಮದ್ ಜುಬೈರ್ ಮೇಲೆ ದಅಖಲಾಗಿದ್ದ ಎಲ್ಲಾ ಪ್ರಕರಣಗಳ ಮೇಲೆ ಜಾಮೀನು ಪಡೆದುಕೊಂಡಂತಾಗಿದೆ. ಇಂದೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ, ದೆಹಲಿಗೆ ವರ್ಗಾಯಿಸುವಂತೆ ಆದೇಶಿಸಿರುವ ನ್ಯಾಯಾಲಯವು, ಈ ಕುರಿತಂತೆ ಏಕೀಕೃತ ತನಿಖೆ ನಡೆಯಬೇಕೆಂದು ಹೇಳಿದೆ.
‘ಒಂದು ಪ್ರಕರಣದಲ್ಲಿ ಜಾಮೀನು ಪಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜುಬೈರ್ ಅವರನ್ನು ಬಂಧಿಸಲಾಗುತ್ತಿದೆ. ಎಲ್ಲ ಎಫ್ಐಆರ್‌ಗಳು ಒಂದೇ ಗುರಿಯನ್ನು ಹೊಂದಿರುವಂತೆ ತೋರುತ್ತದೆ. ಇದೊಂದು ವಿಷವರ್ತುಲದಂತೆ ಗೋಚರಿಸುತ್ತಿದೆ’ಎಂದು ಕಳೆದ ಬಾರಿಯ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಅಭಿಪ್ರಾಯಪಟ್ಟಿತ್ತು