ತಮ್ಮ ಹೆಸರಿರುವ ಪತ್ರವನ್ನು ನಕಲಿ ಮಾಡಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕಲಬುಗಿರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾದ ಆಳಂದ ಶಾಸಕ ಪಾಟೀಲ್ ಅವರು ಶಾಸಕನಾದ ನನ್ನ ಹೆಸರಿನ ಲೆಟರ್ಹೆಡ್ ಸುಳ್ಳು ವಿಷಯ ಸೃಷ್ಟಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಶಾಸಕನಾದ ನನ್ನ ಹೆಸರಿನ ಹಳೆ ಲೆಟರ್ಹೆಡ್ನ್ನು ಉಪಯೋಗಿಸಿ ಇಲ್ಲಸಲ್ಲದ ವಿಷಯವನ್ನು ಪ್ರಸಾರ ಮಾಡಿ ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ದ್ವೇಷ ಹುಟ್ಟಿಸಿ ಅದರ ರಾಜಕೀಯ ಲಾಭ ಪಡೆಯಲು ಕೆಲವರು ಹುನ್ನಾರ ನಡೆಸಿದ್ದಾರೆ.
ಆ ಪತ್ರದಲ್ಲಿ ಸಹಿ ಮಾಡಿದ್ದು ನನ್ನ ಹಸ್ತಾಕ್ಷರದ ಪ್ರತಿಯನ್ನು ಪೇಸ್ಟ್ ಮಾಡಿದ್ದಾರೆ ಮತ್ತು ನನ್ನ ಲೆಟರ್ಹೆಡ್ ಕಳೆದ ಬಾರಿ ಶಾಸಕನಾಗಿದ್ದಾಗ ನಾನು ಕಲಬುರಗಿ ಶಾಂತಿ ನಗರದಲ್ಲಿರುವ ಹಳೆ ವಿಳಾಸ ಕಲರ್ ಜೆರಾಕ್ಸ್ ತೆಗೆದು ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಈಗ ಕಳೆದ 4 ವರ್ಷಗಳಿಂದ ನಾನು ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ವಾಸ ಮಾಡುತ್ತಿದ್ದು, ಈಗ ಬಳಸುವ ಲೆಟರ್ಹೆಡ್ನಲ್ಲಿ ಹೊಸ ವಿಳಾಸವಿದೆ.
ದಿನಾಂಕ24-7-2023ರಂದು ಮುಖ್ಯಮಂತ್ರಿಗಳಿಗೆ ಪತ್ರ ನೀಡಿದ್ದ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಆದರೆ ನಾನು ದಿನಾಂಕ 23-7-2023ರಂದು ಬೆಂಗಳೂರಿನಿಂದ ರೈಲ್ವೆ ಮೂಲಕ ಕಲಬುರಗಿಗೆ ಬೆಳಗ್ಗೆ ದಿನಾಂಕ 24-7-2023ರಂದು ಬಂದು ಕಲಬುರಗಿ ತಲುಪಿರುತ್ತೇನೆ.
ಈ ಪತ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು 3ನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ, ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ 3ನೇ ವ್ಯಕ್ತಿಯ ಮೊರೆ ಹೋಗಬೇಕಾಗಿದೆ ಎಂಬ ಆರೋಪ ಹೊರಿಸಿ ಈ ತಹರ ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಮಾಧ್ಯಮಗಳಿಗೆ ಹರಿಬಿಟ್ಟಿರುವುದು ತನಿಖೆಯಾಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದು ಬಯಲಿಗೆ ಬರಬೇಕು. ಅಂತವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕೆಂದು
ಕಲಬುರಗಿ ಎಸ್ಪಿ ಇಶಾ ಪಂತ್ ಅವರಿಗೆ ಖುದ್ದಾಗಿ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ADVERTISEMENT
ADVERTISEMENT