ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಹೆಸರಲ್ಲಿ ಸೋನಿಯಾ ಗಾಂಧಿಗೆ ನಕಲಿ ಪತ್ರ – ಪೊಲೀಸರಿಗೆ ದೂರು

ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.
ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸಿದ್ದರಾಮಯ್ಯ ಬರೆದಿರುವ ಪತ್ರದಂತೆ ಈ ನಕಲಿ ಪತ್ರವನ್ನು ಸೃಷ್ಟಿಸಲಾಗಿದ್ದು, ಆ ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರ ವಿರುದ್ಧ ಸಿದ್ದರಾಮಯ್ಯನವರ ಹೆಸರಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
ಈ ನಕಲಿ ಪತ್ರದ ಬಗ್ಗೆ ಸಿದ್ದರಾಮಯ್ಯನವರು ತಮ್ಮ ಫೇಸ್​ಬುಕ್​ ಮತ್ತು ಟ್ವಿಟ್ಟರ್​ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ.

ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ.

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ.
ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ.
ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here