ADVERTISEMENT
ಸುಳ್ಳು ಸುದ್ದಿ ಹಬ್ಬಿಸುವವರ ಸಂಬಂಧ ಕೈಗೊಳ್ಳುವ ಕ್ರಮಗಳ ಸಂಬಂಧ ಪ್ರತಿ ತಿಂಗಳು ವರದಿ ಸಲ್ಲಿಕೆ ಮಾಡುವಂತೆ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು.
ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು.
ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು
ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ADVERTISEMENT