ಜೆಡಿಎಸ್ ಪಕ್ಷ ಉಳಿಸಲು ಕುಟುಂಬ ರಾಜಕಾರಣ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.
ಕುಟುಂಬ ರಾಜಕೀಯದ ಬಗ್ಗೆ ಮಾತಾಡುತ್ತೇನೆ. ಅನಿವಾರ್ಯತೆ ಇದ್ದಾಗ ಕುಟುಂಬದಿಂದ ಅಭ್ಯರ್ಥಿ ಮಾಡಿದ್ದೇವೆ.
ರಾಮನಗರ, ಚನ್ನಪಟ್ಟಣದಲ್ಲಿ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ನಾನು ಎರಡು ಕಡೆ ನಿಂತೆ.
ಮಧುಗಿರಿಯಲ್ಲಿ ಕೊನೆ ಘಳಿಗೆಯಲ್ಲಿ ಪಕ್ಷ ಉಳಿಸಲು ಅನಿತಾ ಚುನಾವಣೆಗೆ ನಿಂತರು.
ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ. ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲ
ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಳೂರಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.