ಸುಳ್ಳು, ಪ್ರಚೋದನಕಾರಿ ಸುದ್ದಿ: BJP ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಳವಿಯಾ ವಿರುದ್ಧ FIR

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿಯಲ್ಲಿ ಬಿಜೆಪಿ IT ಸೆಲ್​ನ ಮುಖ್ಯಸ್ಥ ಅಮಿತ್​ ಮಾಳವಿಯಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಐಪಿಸಿ ಕಲಂ 120ಬಿ, 153ಎ, 505(2), 34ರಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ. 

ಕರ್ನಾಟಕ ಕಾಂಗ್ರೆಸ್​ ಪ್ರದೇಶ ಸಮಿತಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್​ ಬಾಬು ಅವರು ದೂರು ಸಲ್ಲಿಸಿದ್ದರು. ದೂರು ಸಲ್ಲಿಕೆ ವೇಳೆ ವೇಳೆ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಅವರು ಇದ್ದರು.

ಟ್ವಿಟ್ಟರ್​ನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಅಮಿತ್​ ಮಾಳವಿಯಾ ಆ ಮೂಲಕ ಸಮಾಜವನ್ನು ಪ್ರಚೋದಿಸುವ ಹಾಗೂ ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ನ ಹಿರಿಯ ನಾಯಕರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಎಫ್​ಐಆರ್​ ದಾಖಲಿಸಲಾಗಿದೆ.