ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.
17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಫೆಬ್ರವರಿಯಲ್ಲಿ ಮಹಿಳೆಯೊಬ್ಬರು ನಮ್ಮ ಮಗಳೊಂದಿಗೆ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಂಚನೆ ಪ್ರಕರಣದಲ್ಲಿ ತಮಗೆ ಸಹಾಯ ಮಾಡುವಂತೆ ಯಡಿಯೂರಪ್ಪ ಅವರ ಬಳಿ ಸಹಾಯ ಕೇಳಿದ್ದರು. ಈ ವೇಳೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಗುರುವಾರ ರಾತ್ರಿ ಮಗಳ ಪರವಾಗಿ ಮಹಿಳೆ ದೂರು ನೀಡಿದ್ದು ಗುರುವಾರ ರಾತ್ರಿಯೆ ಎಫ್ಐಆರ್ ದಾಖಲಾಗಿದೆ.
ಈ ಮೂಲಕ ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಬಿಜೆಪಿ ಮತ್ತು ಯಡಿಯೂರಪ್ಪ ಅವರ ಕುಟುಂಬ ಹೊಸ ಆಘಾತವನ್ನು ಎದುರಿಸಿದೆ.