ಮಾಜಿ ಸಚಿವ ಮತ್ತು ಆರ್ ಆರ್ ನಗರ (R R Nagara) ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು (BJP MLA Muniratna Naidu) ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಕ್ರಮ ಗಣಿಕಾರಿಕೆ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಶಾಸಕ ಮುನಿರತ್ನ ನಾಲ್ಕನೇ ಆರೋಪಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದಡಿ ಯಲಹಂಕ (Yelahanka) ತಹಶೀಲ್ದಾರ್ ಅನಿಲ್ ಅರಳೋಕರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಗಣಿಗಾರಿಕೆ ವಿರುದ್ಧ ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ಕೊಟ್ಟು ಬಳಿಕ ದೂರು ದಾಖಲಿಸಿದ್ದರು.
ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಸಂಬಂಧ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884ರ 9ಬಿ(1ಬಿ) ಮತ್ತು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ADVERTISEMENT
ADVERTISEMENT