ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಯೋಗಗುರು ಬಾಬಾ ರಾಮದೇವ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜಸ್ಥಾನ ರಾಜ್ಯದ ಬರ್ಮೆರ್ ಜಿಲ್ಲೆಯ ಚೌಹಾಥಾನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪಥಾಯಿ ಖಾನ್ ಎಂಬವರು ಕೊಟ್ಟ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ 153ಎ, 295ಎ, 298 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಮತ್ತು ಇಸ್ಲಾಂ ಹಾಗೂ ಕ್ರಿಶ್ಚಿಯನ್ ಧರ್ಮಗಳ ಹೋಲಿಕೆಯ ವೇಳೆ ಮುಸಲ್ಮಾನರ ಬಗ್ಗೆ ಯೋಗಗುರು ಪ್ರಚೋದನಕಾರಿ ಭಾಷಣ ಮಾಡಿದ್ದರು.
ಮುಸಲ್ಮಾನರು ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಾರೆ ಮತ್ತು ಹಿಂದೂ ಮಹಿಳೆಯರನ್ನು ಅಪಹರಿಸುತ್ತಾರೆ ಎಂದು ಯೋಗಗುರು ಫೆಬ್ರವರಿ 2ರಂದು ನಡೆದಿದ್ದ ಸ್ವಾಮೀಜಿಗಳ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು.
ADVERTISEMENT
ADVERTISEMENT