Udupi: ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷಕ್ಕೆ ಪ್ರಚೋದನೆ – ಪೊಲೀಸರಿಂದ ಸ್ವಯಂ ಪ್ರೇರಿತ FIR

ಉಡುಪಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ವೀಡಿಯೋ ಚಿತ್ರೀಕರಣ ಮಾಡಿದ್ದರ ಸಂಬಂಧ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೋ ಮಾಡಿ ಡಿಲೀಟ್​ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ನೇತ್ರ ಜ್ಯೋತಿ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಾಗಿದೆ. 

ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸಿರುವ ಕೃತ್ಯ ಮತ್ತು ಮಾಹಿತಿ ಹಾಗೂ ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯ (ಸಾಕ್ಷ್ಯನಾಶದ) ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿ ವಿರುದ್ಧವೂ ಎಫ್​ಐಆರ್​:

ಮಲ್ಪೆ ಪೊಲೀಸರು ದಾಖಲಿಸಿಕೊಂಡಿರುವ ಎರಡನೇ ಪ್ರಕರಣ ಸುಳ್ಳು ಸುದ್ದಿಗೆ ಸಂಬಂಧಿಸಿದ್ದು.

ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್​ ಕ್ಯಾಮರ ಮೂಲಕ ವೀಡಿಯೋ ಚಿತ್ರೀಕರಿಸಿ ವೀಡಿಯೋ ಫಾರ್ವಡ್​ ಮಾಡಿರುತ್ತಾರೆ ಎಂದು ಎಡಿಟ್​ ಮಾಡಿದ ವೀಡಿಯೋ One India ಕನ್ನಡ  ಯುಟ್ಯೂಬ್​ ಚಾನೆಲ್​ನಲ್ಲಿ ಅಪ್ಲೋಡ್​ ಆಗಿದ್ದು ಅದನ್ನು ಕಾಲು ಸಿಂಗ್​ ಚವ್ಹೌಣ್​ ಎಂಬ ವ್ಯಕ್ತಿ ತನ್ನ ಟ್ವಿಟ್ಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿ ಆಕ್ಷೇಪಾರ್ಹ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ದತೆಗೆ ಬಾಧಕವಾಗುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here