ಹೊಲೆಗೇರಿ ಹೋಲಿಕೆ ಮಾಡಿದ್ದ ನಟ ಉಪೇಂದ್ರ ವಿರುದ್ಧ FIR ದಾಖಲಾಗಿದೆ.
ಬೆಂಗಳೂರು ನಗರ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಕಲಂ 3ರಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ದಕ್ಷಿಣ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ನಟ ಉಪೇಂದ್ರ ವಿರುದ್ಧ ಪೊಲೀಸರಿಗೆ ದೂರು ನೀಡಿ ಎಫ್ಐಆರ್ ದಾಖಲಿಸುವಂತೆ ಸಮತಾ ಸೈನಿಕ ದಳ ಸಹಾಯಕ ನಿರ್ದೇಶಕರಿಗೆ ಆಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು
ADVERTISEMENT
ADVERTISEMENT