ಸಿಕಿಂದ್ರಾಬಾದ್ ನಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ಇಲ್ಲಿನ ಬೋಯಗುಡಾದಲ್ಲಿರುವ ಟಿಮ್ಬರ್, ಸ್ಕ್ರಾಪ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯುಟ್ ಕಾರಣ ಬೆಂಕಿ ಅನಾಹುತ ಉಂಟಾಗಿದ್ದು, 11ಮಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಇಬ್ಬರು ಗೋದಾಮಿನಲ್ಲಿ ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳು ಇವೆ.
ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ
ಸ್ಕ್ರಾಪ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಸಂದರ್ಭದಲ್ಲಿ ಒಟ್ಟು 15 ಕಾರ್ಮಿಕರು ಇದ್ದರು. ಈ ಪೈಕಿ ಇಬ್ಬರು ಬೆಂಕಿ ಕಾಣಿಸಿಕೊಂಡ ಕೂಡಲೇ ಹೊರಗೋಡಿದ್ದಾರೆ.
ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮೃತರನ್ನು ಬಿಹಾರ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ.