ದೆಹಲಿ-ಭೋಪಾಲ್ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ 6.45ರ ಸುಮಾರಿಗೆ ವಿಧಿಶಾ ಜಿಲ್ಲೆಯ ಕುರ್ವಾಯ್ ಮತ್ತು ಕೈಥೋರಾ ರೈಲು ನಿಲ್ದಾಣಗಳ ನಡುವೆ ತೆರಳುತ್ತಿದ್ದ ಸಂದರ್ಭದಲ್ಲಿ ಅಗ್ನಿ ಅನಾಹುತ ತಪ್ಪಿದೆ.
ಸಿ-12 ಬೋಗಿಯ ಬ್ಯಾಟರಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ರೈಲ್ವೇ ಸಿಬ್ಬಂದಿ ರೈಲನ್ನು ನಿಲ್ಲಿಸಿ, ಸಿ-12 ಬೋಗಿಯಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಬೇರೆ ಕಡೆ ಶಿಫ್ಟ್ ಮಾಡಿ, ಬೆಂಕಿ ನಂದಿಸಿದರು. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ರೈಲು ಇಲಾಖೆ ಸಿಬ್ಬಂದಿ ಆಗಿರುವ ಸಮಸ್ಯೆಯನ್ನು ಇತ್ಯರ್ಥ ಪಡಿಸುತ್ತಿರುವ ಕಾರಣ ರೈಲು ಸಂಚಾರ ವಿಳಂಬವಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಭೋಪಾಲ್ನ ರಾಣಿ ಕಮಲಪತಿ ನಿಲ್ದಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ತೆರಳುತ್ತಿತ್ತು.
ADVERTISEMENT
ADVERTISEMENT