ಸಿದ್ದು ಸರ್ಕಾರಕ್ಕೆ ಮೊದಲ ಸವಾಲು.. ಬೆಂಗಳೂರಲ್ಲಿ ರಣಮಳೆ

ನಿನ್ನೆಯಷ್ಟೇ ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.. ಇದಾದ ಒಂದೇ ದಿನದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮಳೆ ರೂಪದಲ್ಲಿ ಮೊದಲ ಸವಾಲು ಎದುರಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನ ಮೂರು ಗಂಟೆಯಿಮದ ಬಿರುಗಾಳಿ, ಗುಡುಗು ಸಹಿತ ಜೋರು ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಆಲಿಕಲ್ಲು ಮಳೆ ಕೂಡ ಆಗಿದೆ.

ರಸ್ತೆಗಳ ತುಂಬೆಲ್ಲಾ ನೀರು ಹರಿಯುತ್ತಿದ್ದು, ವಾಹನ ಸಂಚಾರ ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. ರಣ ಮಳೆ ಮತ್ತು ಬಿರುಗಾಳಿಯ ಕಾರಣ ವಾಹನ ಸವಾರರು ಪರದಾಡಿದ್ದಾರೆ.

ಬೆಂಗಳೂರಿನ ಮಂಜುನಾಥ ನಗರ ಸೇರಿ ಹಲವೆಡೆ ಮರಗಳು ಧರೆಗುರುಳಿವೆ. ಹಲವು, ಮನೆ ವಾಹನಗಳು ಜಖಂ ಆದ ಬಗ್ಗೆ ವರದಿಗಳು ಬರುತ್ತಿವೆ. ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ.

ಬೆಂಗಳೂರು ಮಾತ್ರವಲ್ಲ.. ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳ ಹಲವೆಡೆ ಹಗುರ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ಹಾನಿಗೆ ಸಿದ್ದರಾಮಯ್ಯ ಸರ್ಕಾರ ಹೇಗೆ ಸ್ಪಂದಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.