ಈ ವರ್ಷ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಸವಿನೆನಪಿನಾರ್ಥವಾಗಿ ಅವರ ಹೆಸರಲ್ಲೇ ಲಾಲ್ಬಾಗ್ನಲ್ಲಿ ಫ್ಲವರ್ ಶೋ ನಡೆಸಲಾಗುವುದು ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ. ಈ ಫ್ಲವರ್ ಶೋ ಅಗಸ್ಟ್ 5 ರಿಂದ 15 ರ ವರೆಗೆ ನಡೆಯಲಿದೆ.
ಈ ಬಗ್ಗೆ ವಿಕಾಸಸೌಧದಲ್ಲಿ ಸುದ್ದಿಗೋಷ್ಠ ನಡೆಸಿ ಮಾತನಾಡಿದ ಸಚಿವರು, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ದಿ. ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಡೆಯುತ್ತಿರುವ ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದರು.
ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಂಪೂರ್ಣ ವರದಿ ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ತಿಳಿಸಿದರು.
ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಪುನೀತ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ. ಲಾಲ್ಬಾಗ್ ಫ್ಲವರ್ ಶೋ ಕೋವಿಡ್ನಿಂದ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.