ADVERTISEMENT
ಕಾಂಗ್ರೆಸ್ ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಜಾರಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಜುಲೈ 1 ಅಂದರೆ ಮುಂದಿನ ತಿಂಗಳಿಂದ ಅನ್ನಭಾಗ್ಯದ ಯೋಜನೆಯಡಿ ಒಂದು ಕುಟುಂಬದ ತಲಾ ಒಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ಸಿಗಲಿದೆ.
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಗಲಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಕುಟುಂಬ ಪಡಿತರ ಚೀಟಿಗಳು ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದಿಂದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ದಿನಾಂಕ 01-07-2023ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶಿಸಿದೆ
ಎಂದು ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಆದೇಶದಲ್ಲಿ ಹೇಳಿದೆ.
ADVERTISEMENT